ತ್ರಿಶಾ ವಿರುದ್ಧ ಮಾನನಷ್ಟ ಮೊಕದ್ದಮೆ: ಮನ್ಸೂರ್ ಅಲಿ ಖಾನ್ ಗೆ ದಂಡ ವಿಧಿಸಿದ ಹೈಕೋರ್ಟ್

ನಟಿ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಲ್ಲದೇ, ತಿಶ್ರಾ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದ ನಟ ಮನ್ಸೂರ್ ಅಲಿಖಾನ್ (Mansoor Alikhan) ಗೆ ಮದ್ರಾಸ್ ಹೈಕೋರ್ಟ್ (Madras High Court) ಒಂದು ಲಕ್ಷ ರೂಪಾಯಿ ದಂಡವಿಧಿಸಿದೆ. ಜೊತೆಗೆ ತ್ರಿಶಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಅನುಮತಿಯನ್ನೂ ನಿರಾಕರಿಸಿದೆ.

ಈ ಹಿಂದೆ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌ‍ಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ.

ತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿರಲಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದರು. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಕೂಡ ಆಗಿತ್ತು. ತ್ರಿಷಾ ಬಗೆಗಿನ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು. ಜೊತೆಗೆ ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು. ಈಗ ಕೋರ್ಟ್ ಕೂಡ ದಂಡವಿಧಿಸಿದೆ.

Loading

Leave a Reply

Your email address will not be published. Required fields are marked *