ಬೆಂಗಳೂರು:- ಮುಂದಿನ ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸ್ಥಳೀಯರಿಗೆ ಅವಕಾಶ ನೀಡಬೇಕು ಈ ನಿಟ್ಟಿನಲ್ಲಿ ಜಿ. ಮರಿಸ್ವಾಮಿಯವರೇ ಸೂಕ್ತ ಅಭ್ಯರ್ಥಿ ಎಂದು ಶಾಸಕ ಎಸ್ ಮುನಿರಾಜು ತಿಳಿಸಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕರು ರಾಜ್ಯಾಧ್ಯಕ್ಷರ ಹುದ್ದೆಗೆ ಹಲವಾರು ಹೆಸರುಗಳು ಕೇಳಿ ಬಂದಿದ್ದವು ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲೂ ಕೆಲವು ಹೆಸರುಗಳು ಮುಂಚೂಣಿಯಲ್ಲಿದ್ದವು ಆದರೆ ಪಕ್ಷದ ತೀರ್ಮಾನವೇ ಬೇರೆಯಾಗಿತ್ತು ಇದೇ ರೀತಿ ಹಿಂದಿನ ಚುನಾವಣೆಯಲ್ಲಿ ನನಗೂ ಟಿಕೆಟ್ ಸಿಗುವುದಿಲ್ಲ ಎಂದು ಮಾಧ್ಯಮಗಳಲ್ಲಿ ತೋರಿಸುತ್ತಿದ್ದರು.
ಆದರೆ ನನಗೆ ಟಿಕೆಟ್ ನೀಡಲಿಲ್ಲವೇ ಹಾಗೆಯೇ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಹಲವಾರು ಹೆಸರು ಕೇಳಿ ಬರುತ್ತಿದೆ ಅಷ್ಟೇ ಆದರೆ ಅಂತಿಮವಾಗಿ ಜಿ. ಮರಿಸ್ವಾಮಿಯವರಿಗೆ ಟಿಕೆಟ್ ದೊರೆಯಲಿದ್ದು ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು ಈಗಾಗಲೇ ರಾಜ್ಯಾಧ್ಯಕ್ಷರು ಮತ್ತು ಆರ್ ಅಶೋಕ್ ಬಳಿ ಬೇಡಿಕೆ ಇಟ್ಟಿದ್ದು ಸ್ಥಳೀಯರಿಗೆ ಅವಕಾಶ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.