ರಾಯಚೂರು : ಕಾಂಗ್ರೆಸ್ ಸರ್ಕಾರದಲ್ಲಿ ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರು ಸ್ಪಷ್ಟ ಬಹುಮತ ನೀಡಿದ್ದಾರೆ.
ಕಾಂಗ್ರೆಸ್ ಮುಂದಿನ 5 ವರ್ಷ ಉತ್ತಮ ಆಡಳಿತ ನೀಡಲಿ, ಕ್ರಿಯಾಶೀಲಾ ವ್ಯಕ್ತಿ ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡಬೇಕು. ನಾವು ಯಾವುದೇ ಜಾತಿ ಆಧಾರದ ಮೇಲೆ ಸ್ಥಾನಮಾನ ಕೇಳುತ್ತಿಲ್ಲ. ಅರ್ಹತೆಯ ಆಧಾರದ ಮೇಲೆ ಡಿಸಿಎಂ ಸ್ಥಾನವನ್ನು ಕೇಳಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಈ ಭಾಗದ ಜನರ ಕೊಡುಗೆ ಇದೆ ಹೀಗಾಗಿ ಇವರಿಬ್ಬರಿಗೆ ಉನ್ನತ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.