ಬೆಂಗಳೂರು: ಬೆಂಗಳೂರಿನ ಬೈಯ್ಯಪ್ಪನಹಳ್ಳಿ-ಕೆ.ಆರ್.ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂಆರ್ ಎಸ್ ನಿಂದ ಅನುಮತಿ ಪಡೆದರೂ ಸರ್ಕಾರ ವಿಳಂಬ ಮಾಡುತ್ತಿದೆ.
ರಾಹುಲ್ ಗಾಂಧಿಯಿಂದ ಉದ್ಘಾಟಿಸಲು ಸರ್ಕಾರ ನಿರ್ಧಾರ ಮಾಡಿದೆ. ಆದರೆ, ರಾಹುಲ್ ಗಾಂಧಿ ಈವರೆಗೂ ಸಮಯ ನೀಡಿಲ್ಲ. ಹೀಗಾಗಿ ಬೈಯ್ಯಪ್ಪನಹಳ್ಳಿ-ಕೆ.ಆರ್.ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಲು ವಿನಾಕಾರಣ ವಿಳಂಬ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.