ಪುಣೆ;- ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಮಹಾರಾಷ್ಟ್ರದ ಪುಣೆಗೆ ಭೇಟಿ ನೀಡಿದ್ದ ವೇಳೆ ಮೋದಿ ಈ ಮಾತನ್ನಾಡಿದ್ದಾರೆ. ಪ್ರಧಾನಿ ಮೋದಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಅಭಿವೃದ್ಧಿಗೆ ತನ್ನ ಬಳಿ ಹಣವಿಲ್ಲ ಎಂದು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಇದೇ ರೀತಿ ರಾಜಸ್ಥಾನ ದೊಡ್ಡ ಸಾಲದಲ್ಲಿದೆ. ಇದರಿಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ ಎಂದು ಮೋದಿ ಆರೋಪಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ತ್ವರಿತಗತಿಯ ಅಭಿವೃದ್ಧಿಯನ್ನು ಖಾತರಿಪಡಿಸುವಲ್ಲಿ ವಿಫಲವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹಾಗೂ, ಈ ವೇಳೆ
ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಹಾರಾಷ್ಟ್ರ ಸರ್ಕಾರವನ್ನು ವಿಶೇಷವಾಗಿ ಪುಣೆಯ ಆಡಳಿತವನ್ನು ಅಭಿವೃದ್ಧಿ ವಿಚಾರದಲ್ಲಿ ಕ್ಷಿಪ್ರ ಪ್ರಗತಿಗಾಗಿ ಶ್ಲಾಘಿಸಿದರು. ಈ ವೇಳೆ ಕಾಂಗ್ರೆಸ್ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದು, “ಬೆಂಗಳೂರಿನ ಅಭಿವೃದ್ಧಿಗೆ ತನ್ನ ಬಳಿ ಹಣವಿಲ್ಲ ಎಂದು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ರಾಜಸ್ಥಾನದಲ್ಲಿ ರಾಜ್ಯವು ದೊಡ್ಡ ಸಾಲದಲ್ಲಿದೆ ಮತ್ತು ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ” ಎಂದು ಮೋದಿ ಹೇಳಿದರು.