ಬೆಂಗಳೂರು: ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತ ಆಗಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, . ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತ ಆಗಿದೆ. ಈ ಮಂತ್ರಿಗಳಿಗೆ ನಾಡಿನಲ್ಲಿ ಗ್ಯಾರಂಟಿ ಹೆಸರಲ್ಲಿ ಸರ್ಕಾರ ರಚನೆ ಮಾಡಿ ಯಾವುದೇ ಅಭಿವೃದ್ಧಿ ರಾಜ್ಯದಲ್ಲಿ ಕಾಣುತ್ತಿಲ್ಲ.
ಸರ್ಕಾರ ಬಂದು 8 ತಿಂಗಳು ಆಗಿದೆ. ಬರ ಪರಿಹಾರ ವಿಚಾರದಲ್ಲಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ. 2 ಸಾವಿರ ಹಣ ಕೊಡಲು 105 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಅದು ಎಷ್ಟು ಜನರಿಗೆ ಹೋಗುತ್ತದೆ. 30 ಸಾವಿರ ಕೋಟಿ ನಷ್ಟ ಅಂತ ಹೇಳಿ 105 ಕೋಟಿ ಬಿಡುಗಡೆ ಮಾಡಿದ್ರೆ ಸಾಕಾ? ಇಷ್ಟು ಹಣದಿಂದ ಯಾವ ಪುರುಷಾರ್ಥ ಸಾಧಿಸುತ್ತಾರೆ? ರೈತರನ್ನು ಬದುಕಿಸೋಕೆ ಸಾಧ್ಯನಾ? ಈ ಸರ್ಕಾರದ ನಡವಳಿಕೆ ಗಮನಿಸುತ್ತಿದ್ದೇನೆ ಎಂದು ಕಿಡಿಕಾರಿದರು.