ಧಾರವಾಡ: ಅಂಡರ್‌ಪಾಸ್‌ ನಲ್ಲಿ ಸಿಲುಕಿದ ಟ್ಯಾಂಕರ್‌ ನಿಂದ ಗ್ಯಾಸ್ ಲೀಕ್!

ಧಾರವಾಡ: ಗ್ಯಾಸ್ ತುಂಬಿದ ಟ್ಯಾಂಕರ್ (Gas Tanker) ಒಂದು ಅಂಡರ್ ಪಾಸ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ (Gas Leak) ಆಗಿರುವ ಘಟನೆ ಧಾರವಾಡದ (Dharwad) ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ. ಸದ್ಯ ಆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಗ್ಯಾಸ್ ಲೀಕೇಜ್ ದೊಡ್ಡ ಮಟ್ಟದಲ್ಲಿ ಆಗಿದ್ದು, ಜನ ಸಂಚಾರ ಹಾಗೂ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದು, ಯಾವುದೇ ಅನಾಹುತ ಆಗದಂತೆ ಕಣ್ಣಿಟ್ಟಿದ್ದಾರೆ. ಹೈಕೋರ್ಟ್ ಅಕ್ಕಪಕ್ಕದ ಬೇಲೂರು, ಕೋಟೂರು, ಮುಮ್ಮಿಗಟ್ಟಿ ಸೇರಿದಂತೆ ಇಡಿ ಕೈಗಾರಿಕಾ ಪ್ರದೇಶದ ವಿದ್ಯುತ್ ಸ್ಥಗಿತಗೊಳಿಸಲಾಗಿದೆ.

ಗ್ಯಾಸ್ ಲೀಕೇಜ್‌ನಿಂದಾಗಿ ಬುಧವಾರ ಸಂಜೆಯಿಂದಲೇ ರಸ್ತೆಯನ್ನು ಬಂದ್ ಮಾಡಲಾಗಿದೆ. ಲೀಕೇಜ್ ತಡೆಯಲು ಸಾಧ್ಯವಾಗದ ಹಿನ್ನೆಲೆ ಟ್ಯಾಂಕರ್‌ನಲ್ಲಿರುವ ಇಡೀ ಗ್ಯಾಸ್ ಅನ್ನು ಹೊರ ಹಾಕಿ ಅದನ್ನು ಹೊರತೆಗೆಯಲು ಪ್ರಯತ್ನಿಸಲಾಗುತ್ತಿದೆ. ಕಳೆದ 12 ಗಂಟೆಯಿಂದ ಗ್ಯಾಸ್ ನಿರಂತರವಾಗಿ ಸೋರಿಕೆಯಾಗುತ್ತಿದೆ. ರಾತ್ರಿಯಿಡೀ ಕಳೆದರೂ ಟ್ಯಾಂಕರ್ ಇನ್ನೂ ಖಾಲಿಯಾಗಿಲ್ಲ. ಟ್ಯಾಂಕರ್ ಇನ್ನು ಕೂಡಾ ಅಲ್ಲೇ ಸಿಲುಕಿರುವ ಹಿನ್ನೆಲೆ ಧಾರವಾಡ-ಬೆಳಗಾವಿ ಸಂಪರ್ಕ ಕಡಿತವಾಗಿದೆ. ಟ್ಯಾಂಕರ್ ಸಂಪೂರ್ಣ ಖಾಲಿಯಾದ ಬಳಿಕವೇ ರೋಡ್ ಸಂಚಾರಕ್ಕೆ ಮುಕ್ತಗೊಳ್ಳಲಿದೆ. ಸದ್ಯ ಜನರು ಸುತ್ತ ಮುತ್ತ ಓಡಾಡದಂತೆ ನಿರ್ಬಂಧ ಹೇರಲಾಗಿದೆ.

Loading

Leave a Reply

Your email address will not be published. Required fields are marked *