ನವದೆಹಲಿ: ಕರ್ನಾಟಕದ ಮುಂದಿನ ಸಿಎಂ ಯಾರನ್ನು ಮಾಡಬೇಕು ಎನ್ನುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿಯೇ ಚರ್ಚೆ ನಡೆಯುತ್ತಿದೆ. ಸಿಎಂ ಆಯ್ಕೆ ವಿಚಾರವು ಸುಸೂತ್ರವಾಗಿ ಬಗೆ ಹರಿಯಲಿದೆ ಎಂಬುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ನವದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ರಣದೀಪ್ ಸುರ್ಜೇವಾಲ ಸೇರಿದಂತೆ ಅನೇಕ ಕಾಂಗ್ರೆಸ್ ಹಿರಿಯ ನಾಯಕರು ಆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಕಳೆದ 3 ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಶ್ರಮಿಸುತ್ತಿದ್ದಾರೆ. ಈಗ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.
ಕರ್ನಾಟಕದಲ್ಲಿ ಈ ಬಾರಿ ಮೋದಿ ಮ್ಯಾಜಿಕ್ ನಡೆದಿಲ್ಲ. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ರಾಹುಲ್ ಗಾಂಧಿ ಪ್ರಧಾನಿಯಾಗಲಿದ್ದಾರೆ ಎಂಬುದಾಗಿ ವಿಶ್ವಾಸ ವ್ಯಕ್ತ ಪಡಿಸಿದರು.