ಶಿವಮೊಗ್ಗ: ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ ಆದ್ದರಿಂದ ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಈ ಸರ್ಕಾರವನ್ನು ರಾಜ್ಯದ ಹೆಣ್ಣು ಮಕ್ಕಳು ಎತ್ತಿದ್ದಾರೆ. ಅದನ್ನು ಮುಂದೆ ತೆಗೆದುಕೊಂಡು ಹೋಗುವ ಕೆಲಸವನ್ನು ನೀವು ಮಾಡಬೇಕು. ಶಿವಮೊಗ್ಗ ಜಿಲ್ಲೆಗೆ 100 ಹೊಸ KSRTC ಬಸ್ ಕೇಳಿದ್ದೆ. ಸದ್ಯಕ್ಕೆ 10 ಬಸ್ ಬಂದಿದೆ. ಫೆ.24 ರಂದು ನಡೆಯುವ ಗ್ಯಾರಂಟಿ ಸಮಾವೇಶದಲ್ಲಿ ಬಸ್ ಉದ್ಘಾಟಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.