ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ನಿವಾಸದ ಮುಂದೆ ಜಮಾಯಿಸಿದ ಬೆಂಬಲಿಗರನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ನಾಯಕನಿಗೆ ಶುಭ ಹಾರೈಸಲು ಹಲವಾರು ಕಾಂಗ್ರೆಸ್ ಬೆಂಬಲಿಗರು ಕೇಕ್ ಗಳೊಂದಿಗೆ ಗಂಟೆಗಟ್ಟಲೆ ಕಾಯುತ್ತಿದ್ದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗಾಗಿ ಬೆಂಗಳೂರಿನ ಶಾಗ್ರಿಲಾ ಹೋಟೆಲ್ಗೆ ತೆರಳುವ ಮೊದಲು ಶಿವಕುಮಾರ್ ಅವರಿಗೆ ಹೂಮಾಲೆ ಹಾಕಿ ಹೂಗುಚ್ಛ ನೀಡಲಾಯಿತು.
ಶಾಸಕರ ಅಭಿಪ್ರಾಯ ಸಂಗ್ರಹ ಮಾಡುವುದಕ್ಕೂ ಮೊದಲು ಹೋಟೆಲಿನಲ್ಲಿ ಡಿಕೆ ಶಿವಕುಮಾರ್ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಮೊದಲು ಕೇಂದ್ರ ನಾಯಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ್ದರು. ಇದಾದ ಬಳಿಕ ಶಾಸಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬ ವನ್ನು ಆಚರಣೆ ಮಾಡಿದರು.