ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ನಿನ್ನೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಡೆಸಿದಂತ ಸಭೆಯಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡುವುದಕ್ಕೆ ನಾವು ಬಿಡುವುದಿಲ್ಲ ಎಂಬುದಾಗಿ ಎಚ್ಚರಿಕೆ ನೀಡಿದ್ದರು. ಇಂತಹ ಅವರ ಹೇಳಿಕೆ ಬಗ್ಗೆ ಇದು ಖಂಡನೀಯ ನಡೆ ಎಂಬುದಾಗಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಪೋಲೀಸ್ ಇಲಾಖೆಯ ಸಿಬ್ಬಂದಿಗಳನ್ನು ಕುರಿತು, ಉಪ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಅವರು, ಇಲಾಖೆಯಲ್ಲಿ ಕೇಸರೀಕರಣ ವಿರುದ್ಧ ಎಚ್ಚರಿಕೆ ನೀಡಿರುವುದು ಅತ್ಯಂತ ಅಸಮರ್ಥನೀಯ ಹಾಗೂ ಖಂಡನೀಯವಾಗಿದೆ ಎಂದು ತಿಳಿಸಿದ್ದಾರೆ.