ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಮೂವರು ಡಿಸಿಎಂ ಮಾಡಲು ಮುಂದಾಗಿತ್ತು. ಆದ್ರೇ ಈ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರೋಧ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಮಾತ್ರ ಒಬ್ಬರು ಸಿಎಂ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಕ್ಲೈಮ್ಯಾಕ್ಸ್ ಹಂತವನ್ನು ತಲುಪಿದೆ. ಕೊನೆಗೂ ಸಿಎಂ ರೇಸ್ ನಲ್ಲಿದ್ದಂತ ಡಿಕೆ ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ. ಸಿದ್ಧರಾಮಯ್ಯ ಅವರನ್ನು ಸಿಎಂ ಮಾಡುವುದು, ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಪಟ್ಟ ನೀಡುುವುದಕ್ಕೆ ಇಬ್ಬರು ನಾಯಕರು ಒಪ್ಪಿದ್ದಾರೆ ಎನ್ನಲಾಗುತ್ತಿದೆ.
ಇದಕ್ಕೂ ಮುನ್ನಾ ಕಾಂಗ್ರೆಸ್ ಹೈಕಮಾಂಡ್ ಮೂವರು ಡಿಸಿಎಂ ಮಾಡಲು ಮುಂದಾಗಿತ್ತು ಎನ್ನಲಾಗಿದೆ. ಆದ್ರೇ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಲ್ ಖುಲ್ ಒಪ್ಪಿಲ್ಲ ಎನ್ನಲಾಗಿದೆ. ಹೀಗಾಗಿ ಮೂವರು ಡಿಸಿಎಂ ಪಟ್ಟ ನಿರ್ಧಾರವನ್ನು ಕೈಬಿಡ್ಡು ಡಿಕೆಶಿ ಒಬ್ಬರಿಗೆ ಡಿಸಿಎಂ ನೀಡುವಂತ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.