ನವದೆಹಲಿ : ಕರ್ನಾಟಕದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಬಹುತೇಕ ಫಿಕ್ಸ್ ಆಗಿದ್ದು, ಕಾಂಗ್ರೆಸ್ ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗಿದೆ.
ಮುಂದುವರೆದ ಬೆಳವಣಿಗೆಯಂತೆ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಭೇಟಿಗೆ ಡಿ.ಕೆ ಶಿವಕುಮಾರ್ ಆಗಮಿಸಿದ್ದಾರೆ. ಸಿದ್ದರಾಮಯ್ಯ ಬಳಿಕ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಭೇಟಿಗೆ ಆಗಮಿಸಿದ್ದು, ಕೆಲವೇ ಕ್ಷಣದಲ್ಲಿ ಸಿಎಂ ಹೆಸರು ಅಧಿಕೃತ ಘೋಷಣೆಯಾಗಲಿದೆ.
ಇಂದು ರಾಹುಲ್ ಗಾಂಧಿ ಭೇಟಿ ಬಳಿಕ ‘ಸಿದ್ದರಾಮಯ್ಯ ಸಿಎಂ’ ಎಂದು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಲಿ ಎಂದು ಈ ಹಿಂದೆ ರಾಹುಲ್ ಗಾಂಧಿ ಒಲವು ವ್ಯಕ್ತಪಡಿಸಿದ್ದರು. ಇಂದು ಹೈವೋಲ್ಟೇಜ್ ಸಭೆ ನಡೆಯಲಿದ್ದು, ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.