ಬೆಂಗಳೂರು: ಗ್ಯಾರಂಟಿ ಬದಲಿಗೆ ದೋಖಾ ನಡೆದಿದೆ ಎಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ. 3 ಕೆಜಿ ಅಕ್ಕಿ, 2 ಕೆಜಿ ಜೋಳ ಅಥವಾ ರಾಗಿ ಕೊಡ್ತೀವಿ ಅಂತಿದ್ದಾರೆ. ಇದು ಅನ್ನಭಾಗ್ಯ ಅಲ್ಲ ಕನ್ನಭಾಗ್ಯ ಯೋಜನೆ. ಕೇಂದ್ರದ ಅಕ್ಕಿ ಹೊರತುಪಡಿಸಿ 10 ಕೆಜಿ ಅಕ್ಕಿ ಕೊಡ್ತೀವಿ ಎಂದಿದ್ರು. ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ಕೊಡಬೇಕಿದೆ ಎಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ವಾಗ್ದಾಳಿ ನಡೆಸಿದರು.