ವಿಜಯೇಂದ್ರ ಬಂದು ನನ್ನ ಭೇಟಿ ಆಗುವ ನಾಟಕ ಮಾಡುವುದು ಬೇಡ: ಯತ್ನಾಳ್

ವಿಜಯಪುರ: ಬಿಜೆಪಿಯಲ್ಲಿನ (BJP) ಆಂತರಿಕ ಬೇಗುದಿ ಮುಂದುವರಿದಿದೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುನಿಸು ಕಂಟಿನ್ಯೂ ಆಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ (Basanagouda Patil Yatnal), ವಿಜಯೇಂದ್ರ ಬಂದು ನನ್ನ ಭೇಟಿ ಆಗುವ ನಾಟಕ ಮಾಡುವುದು ಬೇಡ. ಎಲ್ಲ ಸರಿಯಾಗಿದೆ ಎಂದು ಹೇಳಿ ಹೋಗುವುದು ಬೇಡ. ವಿಜಯೇಂದ್ರ ಮೊದಲು ಏನೇನು ನನಗೆ ಅಡೆತಡೆ ಮಡಿದ್ದಾರೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರ (Vijayapura) ಜಿಲ್ಲೆಗೆ ಬಂದ ಅನುದಾನವನ್ನು ವಾಪಸ್ ಪಡೆದರು. ಈಗ ಸರಿ ಮಾಡೋಣ ಅಂದ್ರೆ ಆಗಲ್ಲ. ಲೋಕಸಭಾ ಚುನಾವಣೆ ಮುಗಿದ ನಂತರ ಎಲ್ಲಾ ನಿರ್ಧಾರ ಆಗುತ್ತೆ ಎಂದು ಯತ್ನಾಳ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಬಿ.ವೈ ವಿಜಯೇಂದ್ರ ಅವನ್ನು ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿದ ಬಳಿಕ ಕೆಲವು ನಾಯಕರುಗಳು ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

Loading

Leave a Reply

Your email address will not be published. Required fields are marked *