CM ಆಪ್ತ ಕಾರ್ಯದರ್ಶಿಯಾಗಿ ಡಾ.ವೆಂಕಟೇಶಯ್ಯ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ.ವೆಂಕಟೇಶಯ್ಯ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

ಅಧಿಸೂಚನೆಯಲ್ಲಿ ಕೆಎಎಸ್ ಆಯ್ಕೆ ಶ್ರೇಣಿಯ ಅಧಿಕಾರಿ ಡಾ.ವೆಂಕಟೇಶಯ್ಯ ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ದಿನಾಂಕ 20-05-2023ರಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯಾಗಿ ನೇಮಿಸಿ ಆದೇಶಿಸಿದ್ದಾರೆ.

Loading

Leave a Reply

Your email address will not be published. Required fields are marked *