ಕಲುಷಿತ ನೀರು ಸೇವನೆ ಮಾಡಿ ಸುಮಾರು 118 ಮಂದಿ ಅಸ್ವಸ್ಥರಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಚೂಡಸಂದ್ರದಲ್ಲಿ ಘಟನೆ ಜರುಗಿದ್ದು,118 ಮಂದಿ ನಿವಾಸಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ವಾಂತಿ, ಭೇದಿಯಿಂದ ನರಳುತ್ತಿರುವ ನಿವಾಸಿಗಳಿಗೆ ಚಿಕಿತ್ಸೆ ನೀಡಲು, ಅಪಾರ್ಟ್‌ಮೆಂಟ್ ಆವರಣದಲ್ಲಿಯೇ ಬಿಬಿಎಂಪಿ ತಾತ್ಕಾಲಿಕ ಕ್ಲಿನಿಕ್ ತೆರೆದಿದೆ. ನಿವಾಸಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಸಲುವಾಗಿ ವೈದ್ಯರ ತಂಡವನ್ನು ನಿಯೋಜಿಸಿದೆ. ಜತೆಗೆ ಆಯಂಬುಲೆನ್ಸ್ ಕೂಧಿಡ ಒದಗಿಸಲಾಗಿದೆ. ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಶುದ್ಧ ನೀರು ಒದಗಿಸದ ಬಿಲ್ಡರ್ ವಿರುದ್ಧ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಅಲ್ಲದೆ, ಬಿಬಿಎಂಪಿಯ ಆರೋಗ್ಯ ವಿಭಾಗದ ಅಧಿಕಾರಿಗಳು ಕೂಡ ಬಿಲ್ಡರ್‌ಗೆ ನೋಟಿಸ್ ಜಾರಿ ಮಾಡಿ, ಪೊಲೀಸರಿಗೆ ದೂರು ನೀಡಿದ್ದಾರೆ.