ರೈತರಿಗೆ ಬರ ಪರಿಹಾರ ವಿಚಾರ: ಗುಡ್‌ ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ!

ರಾಜ್ಯದ ರೈತರಿಗೆ ಬರ ಪರಿಹಾರವಾಗಿ ರೂ.2,000 ಮೊದಲ ಕಂತಿನ ಬೆಳೆನಷ್ಟ ಪರಿಹಾರಧನವನ್ನು ಈ ವಾರವೇ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಬರ ಪರಿಹಾರ ಕಾರ್ಯ ಜೋರಾಗಿ ನಡೆದಿದ್ದು, ಸದ್ಯ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಪರಿಣಾಮ ರೈತಾಪಿ ವರ್ಗ ಬೆಳೆ ಕಳೆದುಕೊಂಡು ಸಾಕಷ್ಟು ಸಂಕಷ್ಟದಲ್ಲಿದೆ.

ರೈತರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ಬ್ಯಾಂಕ್ ಗಳಿಗೆ ನಿರ್ದೇಶನ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಅವರು ಬೆಳಗಾವಿಯ ಸುವರ್ಣಸೌಧದ ಕಚೇರಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಜಿಲ್ಲೆಯ ರೈತ ಸಂಘಟನೆಗಳ ಪ್ರತಿನಿಧಿಗಳು ಇಂದು ಕೃಷಿ ಸಚಿವರನ್ನು ಭೇಟಿ ಮಾಡು ತಮ್ಮ ಅಹವಾಲು‌ಗಳನ್ನು ನೀಡಿದರು, ಈ ಸಂದರ್ಭದಲ್ಲಿ ಅವರುಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಕಾನೂನಿನ ಪರಿಮಿತಿ‌ ಹಾಗೂ ಸಂಪನ್ಮೂಲಗಳ ಲಭ್ಯತೆ ಆಧಾರದ ಮೇಲೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಸಚಿವರು ಭರವಸೆ ನೀಡಿದರು.

ಅಷ್ಟೇ ಅಲ್ಲದೆ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾಣಿಸಿಕೊಂಡ ಹಿನ್ನೆಲೆ ಸಾಲ ಮರುಪಾವತಿಗೆ ರೈತರ ಮೇಲೆ ಒತ್ತಡ ಹೇರದಂತೆ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ನಿರ್ದೇಶನ‌ ನೀಡುವಂತೆ ಮುಖ್ಯ ಮಂತ್ರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.

Loading

Leave a Reply

Your email address will not be published. Required fields are marked *