ದೀಪಾವಳಿ ಹಬ್ಬಕ್ಕೆ ಬಂತು ಡಂಕಿ ಹೊಸ ಪೋಸ್ಟರ್

ಬಾಲಿವುಡ್ ಕಿಂಗ್ ಖಾನ್ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ದೀಪಾವಳಿ ಹಬ್ಬದ ಸ್ಪೆಷಲ್ ಡಂಕಿ ಸಿನಿಮಾದ ಎರಡು ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಪ್ರೀತಿ, ನಗು ಹಾಗೂ ಸ್ನೇಹ ತುಂಬಿರುವ ಎರಡು ಹೊಸ ಪೋಸ್ಟರ್ ನಲ್ಲಿ ಶಾರುಖ್ ಸ್ನೇಹ ಬಳಗವನ್ನು ಪರಿಚಯ ಮಾಡಿಕೊಡಲಾಗಿದೆ. ಕಿಂಗ್ ಖಾನ್ ಜೊತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್, ವಿಕ್ರಮ್ ಕೊಚ್ಚರ್ ಹಾಗೂ ಅನಿಲ್ ಗ್ರೋವರ್ ಒಟ್ಟಿಗೆ ನಿಂತು ನಗು ಬೀರಿದ್ದಾರೆ. ಎರಡು ಪೋಸ್ಟರ್ಸ್ ಆಕರ್ಷಕವಾಗಿವೆ.

ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ.

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ

ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ.

Loading

Leave a Reply

Your email address will not be published. Required fields are marked *