ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು..!

ಬೆಂಗಳೂರು: ಬೆಂಗಳೂರು ನಗರದ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದ್ದು, ರಾಬರಿಯಲ್ಲಿ ನಿಪುಣ ಖತರ್ನಾಕ್ ಆಸಾಮಿಯೊಬ್ಬನ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.
ಸುಲ್ತಾನ್ ಪಾಳ್ಯದ ಭುವನೇಶ್ವರ್ ನಗರದ ನಿವಾಸಿಯಾಗಿರುವ ಖತರ್ನಾಕ್ ಆಸಾಮಿ ಯಾಸರ್, ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ರಾಬರಿ ಮಾಡ್ತಿದ್ದರು.
ಸುಮಾರು ಏಳಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ. ಅಪ್ರಾಪ್ತನಾಗಿದ್ದನಿಂದಲೇ ಸುಲಿಗೆ ರಾಬರಿಯಲ್ಲಿ ನಿಪುಣನಾಗಿದ್ದ.
ಇಂದು ಬೆಳಗ್ಗೆ ಆರೋಪಿಯನ್ನ ಹಿಡಿಯಲು ಹೋದಾಗ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಲು ಯತ್ನಿಸಿದ್ದ. ಪ್ಯಾಲೇಸ್ ರೋಡ್ ಬಳಿ ಪರಾರಿಗೆ ಯತ್ನಿಸಿದ್ದು, ಹಿಡಿಯಲು ಹೋದ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಿಡಿದು ಅಟ್ಯಾಕ್ ಮಾಡಲು ಯತ್ನಿಸಿದ್ದಾನೆ.
ಈ ವೇಳೆ ಆತ್ಮರಕ್ಷಣೆಗೆ ಆರೋಪಿ ಬಲಗಾಲಿಗೆ ಗುಂಡು ಹಾರಿಸಿ ಶೇಷಾದ್ರಿಪುರಂ ಇನ್ಸ್ ಪೆಕ್ಟರ್ ಅರೆಸ್ಟ್ ಮಾಡಿದ್ದಾರೆ. ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loading

Leave a Reply

Your email address will not be published. Required fields are marked *