ವಿಜಯಪುರದಲ್ಲಿ ಮತ್ತೆ ಭೂಕಂಪ ತಡರಾತ್ರಿ 2 ಬಾರಿ ಕಂಪಿಸಿದ ಭೂಮಿ!

ವಿಜಯಪುರ: ವಿಜಯಪುರ ಜಿಲ್ಲೆಯ 2 ಕಡೆ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.9 ರಷ್ಟು ತೀವ್ರತೆ ದಾಖಲಾಗಿದೆ. ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಿನ್ನೆ ತಡರಾತ್ರಿ 12.22 ನಿಮಿಷಕ್ಕೆ ಹಾಗೂ ರಾತ್ರಿ‌ 1.20 ನಿಮಿಷಕ್ಕೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪದ ತೀರ್ವತೆಯನ್ನು ರಿಕ್ಟರ್​ ಮಾಪಕದಲ್ಲಿ 2.9 ಎಂದು ಅಳೆಯಲಾಗಿದೆ. ಭೂಮಿಯ 5 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ.

ಭೂಕಂಪನದಿಂದ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಮನೆಯಲ್ಲಿನ ಸಾಮಾಗ್ರಿಗಳು ಚಲ್ಲಾಪಿಲ್ಲಿಯಾಗಿವೆ. ಪದೇ ಪದೆ ಭೂಕಂಪನದಿಂದ ಜನತೆ ಆತಂಕಗೊಂಡಿದ್ದಾರೆ. ವಿಜಯಪುರದಲ್ಲಿ ಪದೇಪದೆ ಭೂಕಂಪನ ಅನುಭವವಾಗುತ್ತಿದ್ದು, ಕಳೆದ ವರ್ಷವಂತೂ ಸುಮಾರು ಹತ್ತಕ್ಕೂ ಹೆಚ್ಚು ಸಲ ಈ ಪ್ರದೇಶದಲ್ಲಿ ಕಂಪನಗಳು ಸಂಭವಿಸಿದ್ದವು. ಇದೀಗ ಹೊಸ ವರ್ಷದಲ್ಲಿ ಮೊದಲ ಭೂಕಂಪನದ ಅನುಭವವಾಗಿದೆ ಎನ್ನುತ್ತಾರೆ ಸ್ಥಳೀಯರು.

Loading

Leave a Reply

Your email address will not be published. Required fields are marked *