ಅಫ್ಘಾನಿಸ್ತಾನದಲ್ಲಿ ಭೂಕಂಪ: ಸಾವನ್ನಪ್ಪಿದವರ ಸಂಖ್ಯೆ 2060ಕ್ಕೆ ಏರಿಕೆ

ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಸಂಭವಿಸಿದ ಪ್ರಬಲ ಭೂಕಂಪದಿಂದ (Earthquake) ಸಾವನ್ನಪ್ಪಿದವರ ಸಂಖ್ಯೆ 2060ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ. ಭೂಕಂಪದಿಂದ ಸುಮಾರು 12 ಗ್ರಾಮಗಳು ನಾಶವಾಗಿವೆ. ಅಲ್ಲಿನ ಸಾವಿರಾರು ಮನೆಗಳು ನೆಲಸಮವಾಗಿವೆ. ನೂರಾರು ಜನ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಸತತ ಪ್ರಯತ್ನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ಕೇಂದ್ರ ಬಿಂದು ಹೆರಾತ್ ನಗರದ ವಾಯುವ್ಯಕ್ಕೆ ಸುಮಾರು 40 ಕಿಲೋಮೀಟರ್ ದೂರದಲ್ಲಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (United States Geological Survey) ಹೇಳಿದೆ. ನಗರದಲ್ಲಿ ಕನಿಷ್ಠ ಐದು ಪ್ರಬಲ ಕಂಪನಗಳು ಸಂಭವಿಸಿವೆ ಎಂದು ತಿಳಿದು ಬಂದಿದೆ. ಅಲ್ಲದೇ ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Loading

Leave a Reply

Your email address will not be published. Required fields are marked *