ಶಾಲಾ ಸಮಯ ಬದಲಾವಣೆ ಮಾಡಲು ಮಹತ್ತರ ಸಭೆ ಕರೆದ ಶಿಕ್ಷಣ ಇಲಾಖೆ

ಬೆಂಗಳೂರು : ನಗರದ ಶಾಲೆಗಳಲ್ಲಿ ಸಮಯ ಬದಲಾವಣೆ ಮಾಡುವ ಪ್ರಕ್ರಿಯೆಯನ್ನ ಶಿಕ್ಷಣ ಇಲಾಖೆ ಶುರು ಮಾಡಿದೆ. ಈ ಸಂಬಂಧ ನಾಳೆ ಶಿಕ್ಷಣ ಇಲಾಖೆ ಮಹತ್ವದ ಸಭೆ ಕರೆದಿದ್ದು, ಸಭೆಯಲ್ಲಿ ಸ್ಕೂಲ್ ಟೈಂ ಬದಲಾವಣೆ ನಿರ್ಧಾರ ಮಾಡೋ ಸಾಧ್ಯತೆ ಇದೆ.
ಬೆಂಗಳೂರು ಟ್ರಾಫಿಕ್ ಸಮಸ್ಯೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಸಮಸ್ಯೆ ಆಗುತ್ತಿದೆ ಎನ್ನುವ ಕಾರಣ ಹೈಕೋರ್ಟ್ ಸಮಯ ಬದಲಾವಣೆಗೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿತ್ತು. ಹೈಕೋರ್ಟ್ ನಿರ್ದೇಶನದ ಮೇರೆಗೆ ಶಾಲಾ ಶಿಕ್ಷಣ ಇಲಾಖೆ ಸಮಯ ಬದಲಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದೆ. ಸಮಯ ಬದಲಾವಣೆ ಕುರಿತು ಅಕ್ಟೋಬರ್ 5 ರಂದು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸಭೆ ಕರೆದಿದ್ದು, ಅಂದೇ ಸಮಯ ಬದಲಾವಣೆಗೆ ತೀರ್ಮಾನ ಮಾಡೋ ಸಾಧ್ಯತೆ ಇದೆ.

ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಗೆ ಸಾರಿಗೆ ಇಲಾಖೆ, ಸಂಚಾರಿ ಪೊಲೀಸ್ ಇಲಾಖೆ, ಪೋಷಕರ ಸಂಘ, ಖಾಸಗಿ ಶಾಲೆಗಳ ಆಡಳಿತ ಮಂಡಳಿ, ಶಾಲಾ ವಾಹನ ಅಸೋಸಿಯೇಷನ್ ಸದಸ್ಯರು, ಶಿಕ್ಷಕರ ಸಂಘದ ಸದಸ್ಯರನ್ನ ಸಭೆಗೆ ಆಹ್ವಾನ ನೀಡಲಾಗಿದೆ.ಈ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಸಮಯ ಬದಲಾವಣೆ ಮಾಡುವ ಬಗ್ಗೆ ಶಿಕ್ಷಣ ಇಲಾಖೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

Loading

Leave a Reply

Your email address will not be published. Required fields are marked *