ಬಿಜೆಪಿಯ ಅಭಿವೃದ್ಧಿ, ಕಾಂಗ್ರೆಸ್ ನ ಒಡೆದು ಆಳುವ ನೀತಿ ನಡುವೆ ಚುನಾವಣೆ ನಡೆದಿದೆ: ಮುಖ್ಯಮಂತ್ರಿ ಬೊಮ್ಮಾಯಿ‌

ಹಾವೇರಿ(ಶಿಗ್ಗಾಂವಿ): ಈ ಬಾರಿಯ ಚುನಾವಣೆ ಬಿಜೆಪಿಯ ಅಭಿವೃದ್ಧಿ ಹಾಗೂ ಕಾಂಗ್ರೆಸ್ ನ ಒಡೆದು ಆಳುವ ನೀತಿಯ ನಡುವೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಅವರು ಮಾತನಾಡಿದರು.

ಈ ಬಾರಿ ಚುನಾವಣೆಯನ್ನು ನಾವ್ಯಾರು ಮಾಡುತ್ತಿಲ್ಲ.‌ ಜನರೇ ಸ್ವಯಂ ಪ್ರೇರಿತರಾಗಿ ಪ್ರಚಾರ ಮಾಡುತ್ತಿದ್ದಾರೆ. ಎಲ್ಲ ಹಳ್ಳಿಗಳಲ್ಲಿ ಹಬ್ಬದ ವಾತಾವರಣ ಇದೆ. ವಿಶೇಷವಾಗಿ ತಾಯಂದಿರ ಉತ್ಸಾಹ, ಬೆಂಬಲ ನೋಡಿದರೆ ಯಾವುದೋ ಜನ್ಮದ ಪುಣ್ಯ ಅಂದುಕೊಂಡಿದ್ದೇನೆ ಎಂದರು.

2018 ರಲ್ಲಿ ನೀವು ಕೊಟ್ಟಿರುವ ಮತದ ಶಕ್ತಿ ಬಹಳ ದೊಡ್ಡದಿದೆ. ನಾನು ಶಾಸಕ, ಮಂತ್ರಿ, ಸಿಎಂ ಕೂಡ ಆಗಿದ್ದೇನೆ. ಈ ಬಾರಿಯ ಚುನಾವಣೆ ಬಿಜೆಪಿಯ ಅಭಿವೃದ್ಧಿ ಹಾಗೂ ಕಾಂಗ್ರೆಸ್ ನ ಒಡೆದು ಆಳುವ ನೀತಿಯ ನಡೆದಿದೆ. ಸಮ್ಮಿಶ್ರ ಸರ್ಕಾರ ಯಾವುದೇ ರೀತಿಯ ಕೆಲಸ ಮಾಡಲಿಲ್ಲ. ನಂತರ ಬಂದ ಬಿಜೆಪಿ ಸರ್ಕಾರ ಸಾಕಷ್ಟು ಅಭಿವೃದ್ಧಿ ಮಾಡಿದೆ ಎಂದರು.

ಯಶಸ್ವಿಯಾಗಿ ಕೋವಿಡ್ ನಿರ್ವಹಣೆ ಮಾಡಿದ್ದೇವೆ. ಪ್ರವಾಹಕ್ಕೆ ಸಿಲುಕಿ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ನೀಡಿದ್ದೇವೆ. ಈ ಬಾರಿ ಎಲ್ಲ ಥರದ ಮನೆ ನಿರ್ಮಾಣಕ್ಕೂ ಐದು ಲಕ್ಷ ರೂ ಅನುದಾನ ನೀಡಲಾಗುವುದು. ನನ್ನ ಕ್ಷೇತ್ರದಲ್ಲಿ ಸುಮಾರು 300 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಿದ್ದೇನೆ.
ನಮ್ಮ ಕ್ಷೇತ್ರದಲ್ಲಿ ಐಟಿಐ ನಿರ್ಮಾಣ ಮಾಡಿದ್ದೆನೆ ಎಂದರು.

ನಾನು‌ ರಾಜ್ಯಾದ್ಯಂತ ಪ್ರವಾಸ ಮಾಡಿದ್ದೇನೆ. ಈ ಬಾರಿ ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸಿ ಎಂದು ಸಿಎಂ ಮನವಿ ಮಾಡಿದರು.

Loading

Leave a Reply

Your email address will not be published. Required fields are marked *