ಬೆಂಗಳೂರು: ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎನ್ನುವ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಸಿಡಿದೆದ್ದಿದ್ದಾರೆ. 7 ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಆಗಲ್ಲ. ಚೂರು ಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ? ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡವರ ಭೂಮಿಗೆ ಬೇಲಿ ಹಾಕುವ ಬೆಟ್ಟಗುಡ್ಡ ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ. ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ದುಷ್ಟ ಪ್ರಜ್ಞೆ ಖಂಡಿತಾ ನನಗಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಗುಡುಗಿದ್ದಾರೆ.
ಕುಮಾರಸ್ವಾಮಿಗೆ ಕಾಮನ್ ಸೆನ್ಸ್ ಇಲ್ಲ ಎಂದು ಡಿಕೆ ಶಿವಕುಮಾರ್ ಹೇಳಿಕೆಗೆ ಮೂಲಕ ಪ್ರತಿಕ್ರಿಯಿಸಿರುವ ಹೆಚ್ಡಿಕೆ, ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿ.ಕೆ.ಶಿವಕುಮಾರ್ ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ ಜೋಕೆ ಎಂದು ಎಚ್ಚರಿಕೆ ನೀಡಿದರು.