ಬೆಂಗಳೂರು;- ಬರ ಪೀಡಿತ ತಾಲೂಕುಗಳ ಘೋಷಣೆ ಮಾಡದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬರ ಪೀಡಿತ ತಾಲೂಕುಗಳ ಬಗ್ಗೆ ಜೂನ್ನಲ್ಲಿ ಕೇಳಿದ್ರೆ ಜುಲೈನಲ್ಲಿ ಘೋಷಣೆ ಮಾಡುತ್ತೇವೆ ಅಂತಾರೆ. ಜುಲೈನಲ್ಲಿ ಕೇಳಿದ್ರೆ ಆಗಸ್ಟ್ ಅಂತಾರೆ. ಆಗಸ್ಟ್ ಮುಗಿದು ಸೆಪ್ಟೆಂಬರ್ ಬಂದರೂ ಬರ ಘೋಷಣೆ ಮಾಡುತ್ತಿಲ್ಲ. ಎಲ್ಲಾ ವಿಚಾರಗಳಲ್ಲೂ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಆಗ್ತಿದೆ ಎಂದರು.
ಸರ್ಕಾರ ತನ್ನ ಕೆಲಸ ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಸರ್ಕಾರದ ಗೃಹಲಕ್ಷ್ಮೀ ಯೋಜನೆ ಕೆಲವು ಮಹಿಳೆಯರಿಗೆ ಮಾತ್ರ ಸಿಕ್ಕಿದೆ. ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಲು ಆರಂಭವಾಗಿದೆ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ ಎಂದು ಅವರು ತಿಳಿಸಿದರು.