ದಾವಣಗೆರೆ: ಲಂಚ ಸ್ವೀಕರಿಸುವಾಗ ಅಬಕಾರಿ ಡಿಸಿ, ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಬಕಾರಿ ಡಿಸಿ ಸ್ವಪ್ನ, ತಮ್ಮ ಕಚೇರಿ ಸಿಬ್ಬಂದಿ ಮೂಲಕ ಮೂರು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಮದ್ಯದ ಅಂಗಡಿ ಆರಂಭಿಸಲು ಪರವಾನಿಗೆ ನೀಡಿಲು ಹರಿಹರ ಮೂಲದ ಡಿ.ಜಿ.ರಂಗನಾಥ ಎಂಬುವರಿಂದ ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯಲ್ಲಿ ಇರುವ ಅಬಕಾರಿ ಇಲಾಖೆ ಕಚೇರಿಯಲ್ಲಿ, ಸಿಬ್ಬಂದಿ ಎಚ್ ಎಂ ಅಶೋಕ ಎಂಬುವರ ಮೂಲಕ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಲೆಗೆ ಬಿದ್ದಿದ್ದಾರೆ.