ಬೆಂಗಳೂರು: ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಕಡೆ ಇಂದು ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ, ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣಾ ಮಳೆ ಗುಡುಗು ಸಹಿತ ಸುರಿಯಬಹುದು. ಅದರಲ್ಲೂ ಕರಾವಳಿ ಭಾಗದ ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗುವ ಸೂಚನೆಯಿದೆ. ಇದಲ್ಲದೇ ಉತ್ತರ ಒಳನಾಡಿನ ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಭಾರೀ ಮಳೆಯಾಗಬಹುದು. ಅದೇ ರೀತಿ ದಕ್ಷಿಣಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಸೋಮವಾರದಂತೆಯೇ ಬುಧವಾರವೂ ಭಾರೀ ಮಳೆಯ ಮುನ್ಸೂಚನೆ ಕಂಡು ಬಂದಿದ
ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಬಹುದು. ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಯಲ್ಲಿ ಹಗುರ ಮಳೆಯಾಗಬಹುದು., ಕೆಲವೊಮ್ಮೆ ಗುಡುಗು ಸಹಿತ ಮಳೆಯೂ ಆಗಬಹಹುದು. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಬಹುದು ಎನ್ನುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.