ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಮೃತ್ಯು, ಅನೇಕ ಮಂದಿಗೆ ಗಾಯ

ಕೋಲ್ಕತ್ತಾ: ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ (West Bengal) ದತ್ತಪುಕೂರ್ನ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅಲ್ಲದೇ ಸ್ಫೋಟದ ತೀವ್ರತೆಗೆ ಈ ಪ್ರದೇಶದಲ್ಲಿನ ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ. ಎರಡು ಅಂತಸ್ತಿನ ಮನೆಯೊಳಗೆ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವರ್ಷ ಮೇ ತಿಂಗಳಲ್ಲಿ ಮಿಡ್ನಾಪುರ ಜಿಲ್ಲೆಯ ಎಗ್ರಾ ಎಂಬಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದರು.

ಅಲ್ಲದೇ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಮತ್ತೊಂದು ಪ್ರಕರಣದಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದರು. ಹಲವಾರು ಸ್ಫೋಟಗಳ ಬಳಿಕ ರಾಜ್ಯ ಸರ್ಕಾರವು ಹೊಸ ನೀತಿಯನ್ನು ಘೋಷಿಸಿತ್ತು. ಇದರ ಅಡಿಯಲ್ಲಿ ಕೈಗಾರಿಕಾ ಕೇಂದ್ರಗಳಲ್ಲಿ ಮಾತ್ರ ಪಟಾಕಿಗಳನ್ನು ತಯಾರಿಸಲು ಸೂಚಿಸಲಾಗಿತ್ತು. ಅಲ್ಲದೇ ಅಕ್ರಮ ಪಟಾಕಿ ತಯಾರಿಕಾ ಘಟಕಗಳ ಪತ್ತೆಗೆ ಅಧಿಕಾರಿಗಳ ತಂಡವನ್ನು ರಚಿಸಲಾಗಿತ್ತು

Loading

Leave a Reply

Your email address will not be published. Required fields are marked *