ಪಾಟ್ನಾ: ಮುಂಬರುವ 2024ರ ಲೋಕಸಭೆ ಚುನಾವಣೆಗೂ ಮುನ್ನವೇ ನಿತೀಶ್ ಕುಮಾರ್ ನೇತೃತ್ವದ ಬಿಹಾರ ರಾಜ್ಯ ಸರ್ಕಾರ ಜಾತಿ ಆಧಾರಿತ ಸಮೀಕ್ಷಾ (Bihar Caste Survey) ವರದಿಯನ್ನು ಬಿಡುಗಡೆ ಮಾಡಿದೆ. ವರದಿ ಬಿಡುಗಡೆ ಮಾಡಿದ ನಂತರ ಪ್ರಧಾನಿ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ. ಜಾತಿಯ ಹೆಸರಲ್ಲಿ ದೇಶವನ್ನ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಯಾವುದೇ ಪಕ್ಷದ ಹೆಸರು ಉಲ್ಲೇಖಿಸದೇ ಬಿಹಾರ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಸಾಧಿಸುವಲ್ಲಿ ವಿಫಲರಾಗಿದ್ದಾರೆ. ಈಗ ಬಡವರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಅಂದಿನಿಂದಲೂ ಬಡವರ ಭಾವನೆಗಳೊಂದಿಗೆ ಆಟವಾಡುವ ಪ್ರವೃತ್ತಿಯನ್ನ ಮುಂದುವರಿಸಿಕೊಂಡು ಬಂದಿದ್ದಾರೆ. ಮೊದಲು ಜಾತಿ ಹೆಸರಿನಲ್ಲಿ ದೇಶವನ್ನ ಒಡೆದರು, ಇಂದು ಅದೇ ಪಾಪ ಕೃತ್ಯವನ್ನು ಮಾಡುತ್ತಿದ್ದಾರೆ. ಭ್ರಷ್ಟಾಚಾರಿಗಳು ಇನ್ನಷ್ಟು ಭ್ರಷ್ಟಾಚಾರಿಗಳಾಗಿದ್ದಾರೆ. ಜಾತಿ ಆಧಾರದ ಮೇಲೆ ದೇಶವನ್ನು ವಿಭಜನೆ ಮಾಡುವ ಯಾವುದೇ ಪ್ರಯತ್ನವೂ ಪಾಪಕ್ಕೆ ಸಮಾನ ಎಂದು ಮೋದಿ ಕಿಡಿ ಕಾರಿದ್ದಾರೆ.