ಮಲಯಾಳಂ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಬಳಿಕ ಬಹುಭಾಷೆಯಲ್ಲಿ ಮಿಂಚಿ ಕನ್ನಡಿಗರಿಗೂ ಚಿರಪರಿಚಿತರಾಗಿದ್ದ ನಟಿ ಸಿತಾರಾ ಕಳೆದ ಕೆಲ ವರ್ಷಗಳಿಂದ ಸಿನಿಮಾ ರಂಗದಿಂದ ದೂರವಿದ್ದರು. ಸಿತಾರಾ ದೇಶದಲ್ಲಿ ಇದ್ದರಾ ಅಥವಾ ವಿದೇಶದಲ್ಲಿ ನೆಲೆಯೂರಿದ್ದರಾ ಎನ್ನುವ ಕುರಿತೂ ಮಾಹಿತಿ ಇರಲಿಲ್ಲ.
ಇದೀಗ ಏಕಾಏಕಿ ಶಬರಿಮಲೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.
ಚಿರಂಜೀವಿ ಸರ್ಜಾ ನಟನೆಯ ‘ಅಮ್ಮ ಐ ಲವ್ ಯೂ’ ಚಿತ್ರದ ನಂತರ ಬಹುತೇಕ ಚಿತ್ರರಂಗದಿಂದಲೇ ದೂರವಿದ್ದ ಸಿತಾರಾಗೆ ಶಬರಿಮಲೆಗೆ ಹೋಗಬೇಕು ಎನ್ನುವ ಸಂಕಲ್ಪವಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಅದನ್ನು ಪೂರೈಸಿದ್ದಾರೆ. ಹಲವು ಮಹಿಳೆಯರ ಜೊತೆ ಶಬರಿಮಲೆಗೆ ಬಂದಿದ್ದ ಸಿತಾರಾ ಅಯ್ಯಪ್ಪನ ದರ್ಶನ ಪಡೆದು ಧನ್ಯರಾಗಿದ್ದಾರೆ.
ಕಾರ್ತಿಕ ಮಾಸದ ಆರಂಭದ ದಿನಗಳಲ್ಲಿ ಶಬರಿಮಲೆ ಬಾಗಿಲು ತೆರೆದಿರುತ್ತದೆ. ಹಾಗಾಗಿ ಇದೇ ಸಂದರ್ಭದಲ್ಲಿ ಸಿತಾರಾ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ್ದಾರೆ. ಕುಟುಂಬದ ಸದಸ್ಯರು ಮತ್ತು ಆಪ್ತರೊಂದಿಗೆ ಶಬರಿಮಲೆಗೆ ಬಂದಿದ್ದ ನಟಿಯ ಆ ಫೋಟೋಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.