ಮಂಡ್ಯ: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಸ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಖಂಡಿಸಿ ಕೆ ಆರ್ ಎಸ್ ಜಲಾಶಯದ ಬಳಿ ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಜ್ಞಾನ ಇಲ್ಲದವರು ನ್ಯಾಯಾಧೀಕರಣದಲ್ಲಿ ಇದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿನ ಸ್ನೇಹ ಬೆಳೆಸಿಕೊಳ್ಳಲು ನೀರು ಬಿಟ್ಟಿದೆ. ರಾಜ್ಯದ ರೈತರ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೀರು ನಿಲ್ಲಿಸ್ರಪ್ಪೋ, ನೀರು ನಿಲ್ಲಿಸ್ರಪ್ಪೋ ಎಂದು ಬಾಯಿ ಬಡೆದುಕೊಂಡು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುರಂಹಕಾರಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಧಿಕ್ಕಾರ ಧಿಕ್ಕಾರ ಎಂದು ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.