ಬೆಂಗಳೂರು;- ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಪದಬಳಕೆ ಮಾಡಿದ ಆರೋಪದ ಮೇಲೆ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ, ಡಿಕೆ ಶಿವಕುಮಾರ್ ವಿರುದ್ಧ ಕೆಲ ಗಂಭೀರ ಆರೋಪಗಳನ್ನು ಮಾಡಿ ಏಕವಚನದಲ್ಲಿ ಗುಡುಗಿದ್ದ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದೂರು ದಾಖಲಾಗಿದೆ.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಬಿಜೆಪಿ ಶಾಸಕ ರಮೇಶ್ ಜಾರಕೊಹೊಳಿ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿನ್ನೆ(ಅಕ್ಟೋಬರ್ 30) ಪತ್ರಿಕಾಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆಕ್ಷೇಪರ್ಹ ಪದ ಬಳಕೆ ಮಾಡಿದ್ದಾರೆ. ಅಲ್ಲದೇ ಆಧಾರ ರಹಿತ ಕೆಲ ಆರೋಪಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.