ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ- 6 ಕಾರ್ಮಿಕರು ಸಜೀವ ದಹನ

ಮುಂಬೈ: ಮಹಾರಾಷ್ಟ್ರದ (Maharashtra) ಗ್ಲೌಸ್ ಕಾರ್ಖಾನೆಯೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ (Fire Accident) ಆರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಮುಂಜಾನೆ 2 ಗಂಟೆಯ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಾರ್ಖಾನೆಯ ಒಳಗೆ ಸಿಲುಕಿದ್ದ 6 ಜನ ಸಾವಿಗೀಡಾಗಿದ್ದಾರೆ. ಕೂಡಲೇ ಆವರಣದೊಳಗೆ ಮಲಗಿದ್ದ ಕಾರ್ಮಿಕರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ ವಿಷಯ ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪಿದಾಗ ಇಡೀ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿತ್ತು. ಕಾರ್ಯಾಚರಣೆ ನಡೆಸಿದ ಸಿಬ್ಬಂದಿ 6 ಜನರ ಮೃತದೇಹಗಳನ್ನ ಹೊರತೆಗೆದಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಮೋಹನ್ ಮುಂಗ್ಸೆ ತಿಳಿಸಿದ್ದಾರೆ.

ಬೆಳಗಿನ ವೇಳೆಗೆ ಬೆಂಕಿ ಹತೋಟಿಗೆ ಬಂದಿದ್ದು, ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *