10 ಅಂತಸ್ತಿನ ಆಸ್ಪತ್ರೆಯಲ್ಲಿ ಬೆಂಕಿ: 125ಕ್ಕೂ ಅಧಿಕ ರೋಗಿಗಳ ಸ್ಥಳಾಂತರ

ಗಾಂಧೀನಗರ: ಗುಜರಾತ್ನ ಅಹಮದಾಬಾದ್  ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಶಾಹಿಬಾಗ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಂ.ಡಿ ಚಂಪಾವತ್ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ನವೀಕರಣ ಕಾರ್ಯ ನಡೆಯುತ್ತಿರುವುದರಿಂದ ನೆಲಮಾಳಿಗೆಯಲ್ಲಿ ಸಂಗ್ರಹಿಸಲಾಗಿದ್ದ ಹಲವಾರು ವಸ್ತುಗಳಿಗೆ ಬೆಂಕಿ ತಗುಲಿ ಭಾರೀ ಹೊಗೆ ಉಂಟಾಯಿತು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಹೇಳಿದ್ದಾರೆ.
ನಗರದ ಸಾಹಿಬಾಗ್ ಪ್ರದೇಶದಲ್ಲಿರುವ ರಾಜಸ್ಥಾನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಳಗಿನ ಜಾವ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ತಂಡಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿವೆ. ಚಾರಿಟಬಲ್ ಟ್ರಸ್ಟ್ಗೆ ಸೇರಿದ ಆಸ್ಪತ್ರೆ ಇದಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *