ಚಂಡೀಗಢ: ಮೇಘಸ್ಫೋಟ, ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿಸೃ, 14 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಧಾರಾಕಾರ ಮಳೆಯಿಂದಾಗಿ ರಾಜ್ಯದ ಹಲವು ಸ್ಥಳಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಪರಿಸ್ಥಿತಿ ಎದುರಾಗಿದ್ದು,
ಪರಿಣಾಮ ಜನನಿಬಿಡ ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಪರಿಣಾಮ ಪ್ರವಾಸಿಗರು ಸೇರಿದಂತೆ ನೂರಾರು ಜನರು ಮಂಡಿ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದು, ಇದರಿಂದಾಗಿ 70 ಕಿಮೀ ಮಂಡಿ-ಪಂಡೋಹ್-ಕುಲ್ಲು ಮಾರ್ಗದಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ. .
ಸೋಮವಾರ ಸಂಜೆ ವೇಳೆಗೆ ಹೆದ್ದಾರಿಯನ್ನು ಭಾಗಶಃ ವಾಹನ ಸಂಚಾರಕ್ಕೆ ತೆರೆಯಲಾಗಿದೆ ಎಂದು ಹೇಳಿದ್ದಾರೆ. ಸಂಚಾರಕ್ಕೆ ಅಡ್ಡಿಯುಂಟು ಮಾಡಿರುವ ಭಾರೀ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳ ಬಳಸಲಾಗುತ್ತಿದೆ. ಭೂಕುಸಿತದಿಂದ ನಿರ್ಬಂಧಿಸಲ್ಪಟ್ಟ ಮಂಡಿ-ಕುಲು ಮಾರ್ಗವನ್ನು ಕೂಡ ಸುಮಾರು 20 ಗಂಟೆಗಳ ನಂತರ ತೆರೆಯಲಾಗಿದೆ.