ಅನಧಿಕೃತ ಲೋಡ್ ಶೆಡ್ಡಿಂಗ್ ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ನವರಾತ್ರಿಗೆ ಮೊದಲಿಗೆ ರಾಜ್ಯದ ಜನರಿಗೆ ಕತ್ತಲೆಭಾಗ್ಯ ಖಾತರಿಪಡಿಸಿರುವ ರಾಜ್ಯ ಕಾಂಗ್ರೆಸ್ ಸರಕಾರ ಹೊಸ ವರ್ಷಕ್ಕೆ ಅದನ್ನು ಜಾರಿ ಮಾಡಲು ಹುನ್ನಾರ ನಡೆಸಿದೆ. ಇದು ಆರನೇ ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. ಈ ಬಗ್ಗೆ ಸುದೀರ್ಘ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರ್ಕಾರದ ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣಾ ವೈಫಲ್ಯದಿಂದ ಕರ್ನಾಟಕವನ್ನು ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ವಿದ್ಯುತ್ ಕ್ಷಾಮಕ್ಕೆ ದೂಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ!! ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ.. ಗ್ಯಾರಂಟಿ. ಇದು ಸತ್ಯ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

Loading

Leave a Reply

Your email address will not be published. Required fields are marked *