ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ಮತದಾನ ನಡೆದಿದ್ದು, ರಾಜ್ಯಾದ್ಯಂತ ಶೇ. 73 ರಷ್ಟು ಮತದಾನವಾಗಿದ್ದು, ಮತದಾನದ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮಧ್ಯರಾತ್ರಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಿಂಗಾಪುರ್ ನತ್ತ ಪ್ರಯಾಣ ಬೆಳೆಸಿದ್ದಾರೆ. ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್‍ಡಿಕೆ ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರ್ ಪ್ರಯಾಣ ಬೆಳೆಸಿದ್ದಾರೆ.
ಸಿಂಗಾಪುರದಲ್ಲಿ ಎರಡು ದಿನ ವಿಶ್ರಾಂತಿ ಪಡೆಯಲಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಮೇ. 13 ರ ಚುನಾವಣೆ ಫಲಿತಾಂಶದ ದಿನ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ ಎನ್ನಲಾಗಿದೆ.