ಮಾಜಿ ಕ್ರಿಕೆಟ್ ಆಟಗಾರ ಶೋಯೆಬ್ ಮಲ್ಲಿಕ್ ಪಾಕ್‌ ನಟಿ ಸನಾ ಜೊತೆ ಮದುವೆ

ದೆಹಲಿ: ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಶೋಯೆಬ್ ಮಲ್ಲಿಕ್ ಮತ್ತೊಂದು ಮದುವೆಯಾಗಿದ್ದು ಇವರ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಮಲಿಕ್ ಅವರು ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದಾರೆ.

ಸನಾ ಜಾವೇದ್ ಅವರೊಂದಿಗೆ ಹಸೆಮಣೆ ಏರಿರುವ ಫೋಟೊಗಳನ್ನು ಶೋಯಬ್ ಮಲಿಕ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ಮಲಿಕ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳು ಇತ್ತೀಚೆಗೆ ಹರಿದಾಡಿದ್ದವು. ಬುಧವಾರವಷ್ಟೇ ಸಾನಿಯಾ ಮಿರ್ಜಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ಪೋಸ್ಟ್‌ವೊಂದು ಇದಕ್ಕೆ ಪುಷ್ಠಿ ನೀಡುವಂತಿತ್ತು.

ಸನಾ ಜಾವೇದ್ ಜೊತೆ ಮಲಿಕ್ ಮದುವೆ ಆಗಿರೋದು ಅಭಿಮಾನಿಗಳಿಗೆ ಬಿಗ್ ಶಾಕ್ ಆಗಿದೆ. ಸಾನಿಯಾ ಮಿರ್ಜಾ ಅಭಿಮಾನಿಗಳು ಕೂಡ ದಿಗ್ಭ್ರಮೆ ಹೊಂದಿದ್ದಾರೆ. ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ 2010ರಲ್ಲಿ ಹೈದರಾಬಾದ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ 2018ರಲ್ಲಿ ಇಜಾನ್ ಎಂಬ ಗಂಡು ಮಗು ಜನಿಸಿದೆ.

ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ಡಿವೋರ್ಸ್​ ಬಗ್ಗೆ ವರ್ಷಗಳಿಂದ ವದಂತಿ ಇದ್ದರೂ ಯಾರೊಬ್ಬರೂ ಕೂಡ ಮಾಹಿತಿ ನೀಡಿಲ್ಲ. ಬುಧವಾರ ಸಾನಿಯಾ ಮಿರ್ಜಾ ಸೋಶಿಯಲ್ ಮೀಡಿಯಾದಲ್ಲಿ ನಿಗೂಢ ಪೋಸ್ಟ್ ಒಂದನ್ನು ಹಾಕಿದ್ದರು. ಅದು ವಿಚ್ಛೇದನಕ್ಕೆ ಸಂಬಂಧಿಸಿದ ವದಂತಿಯನ್ನು ಮತ್ತೆ ಹಬ್ಬಿಸಿತ್ತು.

Loading

Leave a Reply

Your email address will not be published. Required fields are marked *