ಹೃದಯಾಘಾತದಿಂದ ಮಹಾರಾಷ್ಟ್ರದ ಮಾಜಿ CM ಮನೋಹರ್ ಜೋಶಿ ನಿಧನ

ನವದೆಹಲಿ: ಹೃದಯಾಘಾತದಿಂದ ಮಹಾರಾಷ್ಟ್ರದ ಮಾಜಿ CM ಮನೋಹರ್ ಜೋಶಿ ವಿಧಿವಶರಾಗಿದ್ದಾರೆ. ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಮನೋಹರ್ ಜೋಶಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ನಸುಕಿನ ಜಾವ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಜೋಶಿ ಅವರು 1995 ರಿಂದ 1999 ರವರೆಗೆ ಮುಖ್ಯಮಂತ್ರಿಯಾಗಿದ್ದರು ಮತ್ತು ಅವಿಭಜಿತ ಶಿವಸೇನೆಯಿಂದ ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕರಾಗಿದ್ದರು. ಸಂಸತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ವಾಜಪೇಯಿ ಸರ್ಕಾರ ಅಧಿಕಾರದಲ್ಲಿದ್ದಾಗ 2002 ರಿಂದ 2004 ರವರೆಗೆ ಲೋಕಸಭೆಯ ಸ್ಪೀಕರ್ ಆಗಿದ್ದರು.

 

Loading

Leave a Reply

Your email address will not be published. Required fields are marked *