ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಕೆ. ಸುಧಾಕರ್ ಅವರು. ಇಂದು ಬೆಳಗ್ಗೆ ಜೆಪಿ ನಗರದಲ್ಲಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಕಳೆದ ವಾರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅವರ ಸ್ವಗೃಹದಲ್ಲಿ ಮಾಜಿ ಸಚಿವರಾದ ಡಾ.ಸುಧಾಕರವರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿ ಹೂಗುಚ್ಚ ನೀಡಿದರು.
ಈ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಉಪಸ್ಥಿತರಿದ್ದರು. ಈ ಹಿಂದೆ ವಿಜೆಯೇಂದ್ರ ಅವರು ಕೂಡ HDK ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದರು. ಹೀಗೆ ಬಿಜೆಪಿ ನಾಯಕರೆಲ್ಲರೂ ಹೋಗ್ತಾ ಇರೋದನ್ನ ನೋಡಿದ್ರೆ ಬಿಜೆಪಿ- ಜೆಡಿಎಸ್ ಮೈತ್ರಿಗೆ ಕಾರಣವಾಗುತ್ತಾ ಅಥವಾ ಬೇರೆ ಏನಾದರೂ ಇದೆಯಾ ಎಂದು ಕಾದುನೋಡಬೇಕಿದೆ.