ಮಾಜಿ ವಿಶ್ವಸುಂದರಿ ಸ್ಪರ್ಧಿ ಶೆರಿಕಾ ಇನ್ನಿಲ್ಲ

ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್ (26) ನಿಧನರಾಗಿದ್ದಾರೆ (Former Miss World Contestant Sherika De Armas). ಗರ್ಭ ಕಂಠದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಕಳೆದ 2 ವರ್ಷಗಳಿಂದ ಶೆರಿಕಾ ಅವರು ಕ್ಯಾನರ್ (Cervical Cancer) ನಿಂದ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದರು.

ಹಲವು ಬಾರಿ ಚಿಕಿತ್ಸೆಗೆ ಒಳಗಾದರೂ ಯಾವುದೇ ಪ್ರಯೋಜನವಾಗಿಲ್ಲ. ಶೆರಿಕಾ ಅವರು 2015ರಲ್ಲಿ ತನ್ನ ದೇಶ ಉರುಗ್ವೆಯನ್ನು ಪ್ರತಿನಿಧಿಸಿದ್ದರು. ಸದ್ಯ ಶೆರಿಕಾ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು ಹಾಗೂ ಸ್ನೇಹಿತರು ಕಂಬನಿ ಮಿಡಿದಿದ್ದಾರೆ. ಮಿಸ್ ಉರುಗ್ವೆ, ಕಾರ್ಲಾ ರೊಮೆರೊ ಅವರು ನನ್ನ ಜೀವನದಲ್ಲಿ ನಾನು ಭೇಟಿಯಾದ ಅತ್ಯಂತ ಸುಂದರ ಮಹಿಳೆಯರಲ್ಲಿ ಒಬ್ಬರು ಎಂದು ಶೋಕ ವ್ಯಕ್ತಪಡಿಸಿದ್ದಾರೆ.

Loading

Leave a Reply

Your email address will not be published. Required fields are marked *