ಬೆಂಗಳೂರು: ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಹಿರೇಹಡಗಲಿಯ ಹಾಲ ಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಾಮೀಜಿಗೆ ರಾಜ್ಯ ಹೈಕೋರ್ಟ್ ನವೆಂಬರ್ 8ರಂದು ಜಾಮೀನು ನೀಡಿತ್ತು. ಇದಾದ ಬಳಿಕ ಶೂರಿಟಿ, ಇಬ್ಬರು ವ್ಯಕ್ತಿಗಳ ಬಾಂಡ್ ಸೇರಿದಂತೆ ಹಲವು ಷರತ್ತುಗಳನ್ನು ಪೂರೈಸಿದ ಬಳಿಕ ಶನಿವಾರ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.