ಕಲಬುರಗಿ: ಕಲಬುರಗಿ ಜಿಲ್ಲೆಯ ಶಹಾಬಾದ್ ಬಳಿಯ ಕಾಗಿಣಾ ನದಿಗೆ ಹಾರಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಯಿ ಸುಮಲತಾ (45), ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ.
ಇವರಿಬ್ಬರು ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ರಾತ್ರಿ ಕಾಗಿಣಾ ನದಿಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ-ಮಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.