ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಿ20 ಶೃಂಗಸಭೆಯ ಜವಾಬ್ದಾರಿ ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸುವ ಮೂಲಕ ನವದೆಹಲಿಯಲ್ಲಿ ಜಿ20 ಶೃಂಗಸಭೆಯನ್ನು ಮುಕ್ತಾಯಗೊಳಿಸಿದರು. ಹೀಗಾಗಿ ಮುಂದಿನ ಜಿ20 ದೇಶಗಳ ಶೃಂಗಸಭೆ ಬ್ರೆಜಿಲ್ನಲ್ಲಿ ನಡೆಯಲಿದೆ.
ಇನ್ನು “ನಾನು ಬ್ರೆಜಿಲ್ ಅಧ್ಯಕ್ಷ ಮತ್ತು ನನ್ನ ಸ್ನೇಹಿತ ಲುಲಾ ಡಾ ಸಿಲ್ವಾ ಅವರನ್ನು ಅಭಿನಂದಿಸುತ್ತೇನೆ ಮತ್ತು ಅವರಿಗೆ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಲು ಬಯಸುತ್ತೇನೆ” ಎಂದು ಜಿ20 ಶೃಂಗಸಭೆಯ ಜವಾಬ್ದಾರಿಯನ್ನು ಹಸ್ತಾಂತರಿಸಿದರು.