ಗ್ರಾಹಕರಿಗೆ ಗುಡ್‌ ನ್ಯೂಸ್‌ : ವಾಣಿಜ್ಯ ಬಳಕೆಯ 19 ಕೆಜಿ LPG ಸಿಲಿಂಡರ್​​ ಬೆಲೆ ಇಳಿಕೆ

ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಎಲ್‌ಪಿಜಿ ಸಿಲಿಂಡರ್‌ (Cylinder) ಬೆಲೆ ಭಾರೀ ಇಳಿಕೆಯಾಗಿದೆ. ಜನವರಿ 1ರಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್​​ ಬೆಲೆ ದೇಶದ ಕೆಲವು ನಗರಗಳಲ್ಲಿ ತುಸು ಕಡಿಮೆಯಾಗಿದೆ.

ತೈಲ ಕಂಪನಿಗಳು (Oil Marketing Companies) ವಾಣಿಜ್ಯ ಬಳಕೆಯ (Commercial LPG) 19 ಕೆಜಿ ಸಿಲಿಂಡರ್‌ ಬೆಲೆ 39.50 ರೂ.

ಇಳಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.

ಭಾರತೀಯ ತೈಲ ಕಂಪನಿಗಳು ಈ ಹಿಂದೆ ಡಿಸೆಂಬರ್ 22 ರಂದು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿದ್ದವು. ಅದಕ್ಕೂ ಮುನ್ನ ಡಿಸೆಂಬರ್ 1ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು ಅಗ್ಗವಾಗಿದ್ದವು. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಹದಿನೈದು ದಿನಗಳಿಗೊಮ್ಮೆ ಎಲ್​ಪಿಜಿ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಣೆ ಮಾಡುತ್ತವೆ.

ಬೆಲೆ ಇಳಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,755.50 ರೂ. ಆಗಿದೆ. ಈ ಮೊದಲು ಈ ದರ 1,757 ರೂ. ಇತ್ತು. ಹೀಗಾಗಿ ದೆಹಲಿಯಲ್ಲಿ ಒಂದೂವರೆ ರೂಪಾಯಿಯಷ್ಟು ಬೆಲೆ ಇಳಿಕೆಯಾದಂತಾಗಿದೆ. ಚೆನ್ನೈನಲ್ಲಿ, ಎಲ್‌ಪಿಜಿ ಬೆಲೆಯನ್ನು 4.50 ರೂ ಕಡಿತಗೊಳಿಸಲಾಗಿದೆ ಮತ್ತು 19 ಕೆಜಿ ಸಿಲಿಂಡರ್ ಬೆಲೆ ಈಗ 1,924.50 ರೂ. ಆಗಿದೆ.

ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1.50 ರೂಪಾಯಿ ಇಳಿದು 1,708.50 ರೂಪಾಯಿಗೆ ತಲುಪಿದೆ. ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಇಂದು 50 ಪೈಸೆ ಏರಿಕೆಯಾಗಿದ್ದು, 1,869 ರೂ.ಗೆ ಆಗಿದೆ.

Loading

Leave a Reply

Your email address will not be published. Required fields are marked *