ಮೈಸೂರು: ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶ ವಿಚಾರವಾಗಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಯಾವುದೇ ಕಾರಣಕ್ಕೂ ಸರ್ಕಾರ ನೀರು ಬಿಡುವ ನಿರ್ಧಾರ ಮಾಡಬಾರದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಸರ್ಕಾರ ಧಿಕ್ಕರಿಸಬೇಕು.
ರಾಜ್ಯ ಸರ್ಕಾರ ಈಗಾಗಲೇ ನೀರು ಬಿಡಲ್ಲ ಎನ್ನುವ ತೀರ್ಮಾನ ಕೈಗೊಂಡಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳಬೇಕು. ಜಲಾಶಯಗಳು ಖಾಲಿಯಾಗಿವೆ, ನೀರು ಬಿಡಲ್ಲ ಎನ್ನುವ ಬದ್ಧತೆ ತೋರಬೇಕು. ರಾಜ್ಯದ ಜನರ ಹಿತರಕ್ಷಣೆಗಾಗಿ ಸರ್ಕಾರ ಕೆಲಸ ಮಾಡಬೇಕು. ಈಗಾಗಲೇ ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರನ್ನು ಬಲಿ ಕೊಟ್ಟಾಗಿದೆ. ನಗರ ಪ್ರದೇಶಗಳ ಜನರನ್ನು ಬಲಿ ಕೊಡುವ ಸ್ಥಿತಿ ನಿರ್ಮಾಣ ಮಾಡಬಾರದು ಎಂದರು.