ಹಾವೇರಿ ಅತ್ಯಾಚಾರ ಕೇಸ್ ಮುಚ್ಚಿಹಾಕಲು ಸರ್ಕಾರ ತಂತ್ರ ಹೆಣೆಯುತ್ತಿದೆ: ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳಿಯ ಪೊಲೀಸರು ಮುಚ್ಚಿಹಾಕುವ ಪ್ರಯತ್ನ ಮಾಡುವುದಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ.

ಮುಖ್ಯಮಂತ್ರಿಗಳ ಈ ನಿಲುವನ್ನು ಖಂಡಿಸುತ್ತೇನೆ. ಅವರಿಗೆ ಸಂತ್ರಸ್ತ ಮಹಿಳೆಗೆ ನ್ಯಾಯಕೊಡಿಸುವ ಉದ್ದೇಶ ಇದ್ದರೆ ಕೂಡಲೆ ಎಸ್ ಐಟಿ ರಚನೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಹಾವೇರಿ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ಥೆಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಮನೆಗೆ ಕಳಿಸಿರುವುದಕ್ಕೆ ಸಿಎಂ ಬಳಿ ಉತ್ತರ ಇಲ್ಲ. ಹಾಗೂ ಅವಳಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹೇಳಿರುವುದು. ಸರ್ಕಾರ ಇಷ್ಟು ದೊಡ್ಡ ಆರೋಗ್ಯ ಇಲಾಖೆ ಇದ್ದು, ಅವಳಿಗೆ ಸೂಕ್ತ ಚಿಕಿತ್ಸೆ ಕೊಡಲು ತಯಾರಿಲ್ಲ ಎಂದರೆ, ಮತ್ತು ಆ ಜವಾಬ್ದಾರಿಯನ್ನು ತಮ್ಮ ಶಾಸಕರಿಗೆ ವಹಿಸಿರುವಂಥದ್ದು.

ಈ ಪ್ರಕರಣವನ್ನು ಮುಚ್ಚಿ ಹಾಕುವ ಹಾಗೂ ಆ ಹೆಣ್ಣು ಮಗಳನ್ನು ಸಂಪೂರ್ಣ ಹತೊಟಿಗೆ ತೆಗೆದುಕೊಳ್ಳುವ ತಂತ್ರ ಗೊತ್ತಾಗುತ್ತದೆ. ಆದ್ದರಿಂದ ಅವಳಿಗೆ ಚಿಕಿತ್ಸೆಯನ್ನು ಸಂಪೂರ್ಣ ಸರ್ಕಾರಿ ವ್ಯವಸ್ಥೆಯಲ್ಲಿಯೇ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *