ಬೆಂಗಳೂರಿನ ತಾಜ್ವೆಸ್ಟ್ ಎಂಡ್ ಹೋಟೆಲ್ನಲ್ಲಿ ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ ಆರಂಭವಾಗಿದೆ. ಮಹಾಘಟಬಂಧನ್ ಸಭೆಯಲ್ಲಿ 40ಕ್ಕೂ ಹೆಚ್ಚು ನಾಯಕರು ಉಪಸ್ಥಿತರಿದ್ದಾರೆ. ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ, ಆಪ್ ಮುಖ್ಯಸ್ಥ ಕೇಜ್ರಿವಾಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ‘ಕೈ’ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್,ಪಂಜಾಬ್ ಸಿಎಂ ಭಗವಂತ್ ಮಾನ್, ಜಾರ್ಖಂಡ್ ಸಿಎಂ ಸೊರೇನ್, ಪಶ್ಚಿಮ ಬಂಗಾಳ ಸಿಎಂ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಬಿಹಾರ ಮುಖ್ಯಮಂತ್ರಿ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಮಾಜಿ ಸಿಎಂಗಳಾದ ಓಮರ್ ಅಬ್ದುಲ್ಲಾ, ಉದ್ಧವ್ ಠಾಕ್ರೆ, ಲಾಲೂ ಪ್ರಸಾದ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಮಾಜಿ ಸಿಎಂ ಅಖಿಲೇಶ್ ಯಾದವ್, ಮುಖಂಡರಾದ ಅಭಿಷೇಕ್ ಬ್ಯಾನರ್ಜಿ, ಆದಿತ್ಯ ಠಾಕ್ರೆ ಸೇರಿದಂತೆ ಮಹಾಮೈತ್ರಿಕೂಟದಲ್ಲಿ 40ಕ್ಕೂ ಹೆಚ್ಚು ನಾಯಕರು ಉಪಸ್ಥಿತರಿದ್ದಾರೆ.