ಬಸ್’ಗೆ ನಮಸ್ಕರಿಸಿ ಫ್ರೀ ಪ್ರಯಾಣ ಮಾಡಿದ ಅಜ್ಜಿ..!

ಧಾರವಾಡ: ಮಹಿಳೆಯರ ಉಚಿತ ಬಸ್ ಪ್ರಯಾಣದ ನಾರಿ `ಶಕ್ತಿ’ ಯೋಜನೆಯನ್ನ ರಾಜ್ಯ ಸರ್ಕಾರ ಭಾನುವಾರ (ಜೂನ್ 11) ದಿಂದ ಜಾರಿಗೊಳಿಸಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿವಕುಮಾರ್  ಮೊದಲಾದ ಗಣ್ಯರು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.
ಧಾರವಾಡದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ವೇಳೆ ವೃದ್ಧೆಯೊಬ್ಬರು ಬಸ್ಸಿನ ಮೆಟ್ಟಿಲಿಗೆ ಶಿರವಿಟ್ಟು ನಮಸ್ಕರಿಸಿ ಬಸ್ಸಿನೊಳಗೆ ಪ್ರವೇಶಿಸಿದ ವಿಶೇಷ ಸನ್ನಿವೇಶವೊಂದು ಕಂಡುಬಂದಿದೆ. ಬಸ್ ಹತ್ತುವ ಮುನ್ನ ಅಜ್ಜಿ ತನ್ನ ತಲೆಯನ್ನು ಬಸ್ ಮೆಟ್ಟಿಲ ಮೇಲಿಟ್ಟು ನಮಸ್ಕರಿಸಿದ್ದು, ಅಜ್ಜಿಯ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಶಕ್ತಿಯೋಜನೆ ಜಾರಿಯಾದ ಮೊದಲ ದಿನವೇ ಮಹಿಳಾಮಣಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರಿ ಬಸ್ಗಳಲ್ಲಿ ಉಚಿತ ಸಂಚಾರದ ಕೊಡುಗೆ ಲಭ್ಯ ಆಗಿರೋದಕ್ಕೆ ನಾರಿಮಣಿಯರು ಫುಲ್ ಖುಷಿಯಾಗಿದ್ದಾರೆ. ಕೆಲ ಮಹಿಳೆಯರು ಕುಣಿದು ಕುಪ್ಪಳಿಸಿ ತಮ್ಮ ಸಂಭ್ರಮ ಹಂಚಿಕೊಂಡಿದ್ದಾರೆ. ಪ್ರವಾಸಿ ತಾಣಗಳಿಗೆ ತೆರಳುವ ಬಸ್ಗಳಲ್ಲಿ ಮಹಿಳೆಯಯರೇ ಹೆಚ್ಚು ಸಂಖ್ಯೆಯಲ್ಲಿದ್ದದ್ದು ಕಂಡುಬಂದಿದೆ. ಕೆಲವರು ಕುಟುಂಬದ ಜೊತೆ..
ಇನ್ನೂ ಕೆಲವರು ಬಂಧುಗಳ ಜೊತೆ.. ಇನ್ನೂ ಕೆಲವರು ಗೆಳೆತಿಯರ ಜೊತೆ ಟ್ರಿಪ್ ಹೊರಟಿದ್ದ ದೃಶ್ಯ ಕಂಡುಬಂದಿದೆ. ಉಚಿತ ಪ್ರಯಾಣದ ಟಿಕೆಟ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಮಹಿಳೆಯರು ಸಂಭ್ರಮಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಲ ಮಹಿಳೆಯರು, ʻʻಪತಿ ಜೊತೆಗೆ ಜಗಳ ಆದ್ರೆ ತವರಿಗೆ ಹೋಗಬಹುದು, ತವರಲ್ಲಿ ಜಗಳ ಆದ್ರೆ ಪತಿ ಮನೆಗೆ ಬರಬಹುದುʼʼ ಎಂದು ತಮಾಷೆ ಮಾಡಿದ್ದಾರೆ.

Loading

Leave a Reply

Your email address will not be published. Required fields are marked *